Siddaramaiah Profile picture
ಕನ್ನಡಿಗ | Believer in equity & social justice | Family man | Chief Minister of Karnataka (2023- ,2013 - 2018)

Aug 23, 2019, 24 tweets

ಕೋಮುವಾದಿ ಬಿಜೆಪಿ ಜಾತ್ಯತೀತ ಶಕ್ತಿಗಳನ್ನು ನಾಶ ಮಾಡಲು ಹೊರಟಿರುವಾಗ ಆ ಪಕ್ಷವನ್ನು ಜಾತ್ಯತೀತ ಶಕ್ತಿಗಳೆಲ್ಲ ಒಗ್ಗಟ್ಟಿನಿಂದ ಎದುರಿಸಬೇಕು ಎನ್ನುವುದು ನನ್ನ ನಿಲುವು. ಆದರೆ ಜಾತ್ಯತೀತರೆಂದು ಹೇಳಿಕೊಳ್ಳುವವರು ಪರೋಕ್ಷವಾಗಿ ಕೋಮುವಾದಿ ಶಕ್ತಿಗಳಿಗೆ ನೆರವಾಗುತ್ತಿರುವಾಗ ಅದನ್ನು ಕೂಡಾ ನಾವು ಖಂಡಿಸಬೇಕಾಗುತ್ತದೆ.
#MyPressConference

ನನ್ನ ವಿರುದ್ಧದ ಆರೋಪಗಳಿಂದ ಯಾವ ಪಕ್ಷಕ್ಕೆ ಖುಷಿಯಾಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು. ಬಿಜೆಪಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಮಾಡುತ್ತಿರುವ ಪ್ರಯತ್ನಗಳನ್ನು ಕಂಡು ದೇವೇಗೌಡರು ಹೆದರಿರುವಂತೆ ಕಾಣಿಸುತ್ತಿದೆ. ಇದಕ್ಕಾಗಿ ಅವರನ್ನು ಖುಷಿಪಡಿಸಲು ನನ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ.

#MyPressConference
#Cauvery

ಯಡಿಯೂರಪ್ಪನವರು ದೆಹಲಿಗೆ ಹೋಗಿ ಬಂದ ಮರುದಿನವೇ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುತ್ತಿದ್ದೇವೆ ಎಂದು ಪ್ರಕಟಿಸಿದ ನಂತರವೂ, ಗೌಡರಿಗೆ ಮಾತ್ರ ಈ ನಿರ್ಧಾರದಲ್ಲಿ ಮೋದಿ ಮತ್ತು ಶಾ ಕೈವಾಡ ಕಾಣಿಸುತ್ತಿಲ್ಲವಂತೆ. ಗೌಡರು ಯಾರನ್ನು ಖುಷಿಪಡಿಸಲು ಈ ರೀತಿ ಅಮಾಯಕರಂತೆ ಮಾತನಾಡುತ್ತಿದ್ದಾರೆ?

#MyPressConference
#Cauvery

ತಾವು ಮುಖ್ಯಮಂತ್ರಿಯಾಗಲು ಒಂದು ಸರ್ಕಾರವನ್ನು ಉರುಳಿಸುವುದನ್ನು ನಾವು-ನೀವೆಲ್ಲ ಕೇಳಿದ್ದೇವೆ. ಆದರೆ ವಿರೋಧ ಪಕ್ಷದ ನಾಯಕನಾಗಲು ಸರ್ಕಾರವನ್ನು ಉರುಳಿಸುವುದನ್ನು ನಾನೆಂದೂ ಕೇಳಿಲ್ಲ. ಇಂತಹದ್ದೊಂದು ಕಲ್ಪನಾ ವಿಲಾಸದಲ್ಲಿ ತೇಲಾಡುವಂತೆ ಮಾಡಲು ದೇವೇಗೌಡರಿಂದ ಮಾತ್ರ ಸಾಧ್ಯ.

#MyPressConference
#Cauvery

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಉದ್ದೇಶವಾಗಿತ್ತು ಎಂಬ ದೇವೇಗೌಡರ ಆರೋಪ ಕಪೋಲಕಲ್ಪಿತ, ನಿರಾಧಾರವಾದುದು. ಸಮ್ಮಿಶ್ರ ಸರ್ಕಾರದ ಪತನಕ್ಕೆ ಎಚ್.ಡಿ.ದೇವೇಗೌಡರು ಮತ್ತು ಅವರ ಆದೇಶದಂತೆಯೇ ಕೆಲಸ ಮಾಡುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಾರಣ.

#MyPressConference
#Cauvery

ದೇವೇಗೌಡರ ರಾಜಕೀಯದ ಆಟಗಳನ್ನೆಲ್ಲ ನೋಡಿ ಅನುಭವಿಸಿದ ನನಗೆ ಜೆಡಿಎಸ್ ಜೊತೆ ಮೈತ್ರಿಗೆ ಸಹಮತ ಇರಲಿಲ್ಲ ಎನ್ನುವುದು ನಿಜ. ನನ್ನಂತೆಯೇ ಬಹುತೇಕ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಜೊತೆ ಮೈತ್ರಿ ಅಷ್ಟೊಂದು ಇಷ್ಟ ಇರಲಿಲ್ಲ. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ಶಿರಬಾಗಿ ನಾವು ಒಪ್ಪಿಕೊಂಡೆವು.

#MyPressConference
#Cauvery

ಕುಮಾರಸ್ವಾಮಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೆವು. ಸರ್ಕಾರಕ್ಕೆ ಏನಾದರೂ ಕಿರುಕುಳ ನೀಡಿದ್ದ ಒಂದೇ ಒಂದು ಉದಾಹರಣೆ ಕೊಡಲಿ. ಕುಮಾರಸ್ವಾಮಿಯವರು ನಮ್ಮೆಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಸಮನ್ವಯ ಸಮಿತಿಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೂಡಾ ಕುಮಾರಸ್ವಾಮಿ ಜಾರಿ ಮಾಡಲಿಲ್ಲ.

#MyPressConference

ಇವತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಅದಕ್ಕೆ ಗೌಡರ ಕುಟುಂಬವೇ ಕಾರಣ. ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದು ಜೆಡಿಎಸ್ ಶಾಸಕರ ಜೊತೆಗೂಡಿ ಹೋಗಿ ಬಿಜೆಪಿಗೆ ಶರಣಾದರಲ್ಲಾ, ಅದೇ ದಿನ ರಾಜ್ಯದಲ್ಲಿ ಬಿಜೆಪಿ ಒಂದು ಕಾಲು ಊರಿತ್ತು.

#MyPressConference
#Cauvery

ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆಯುವುದು ದೇವೇಗೌಡ ಮತ್ತು ಕುಮಾರಸ್ವಾಮಿಯವರ ಹುಟ್ಟುಗುಣ. ರಾಮಕೃಷ್ಣ ಹೆಗಡೆಯವರನ್ನು ಹಣಿಯಲು ಯತ್ನಿಸಿದವರು ಯಾರು? ತಾನೇ ಮುಖ್ಯಮಂತ್ರಿ ಮಾಡಿದ ಜೆ.ಎಚ್.ಪಟೇಲ್ ಅವರಿಗೆ ಕಿರುಕುಳ ಕೊಟ್ಟವರು ಯಾರು? ಎಸ್.ಆರ್.ಬೊಮ್ಮಾಯಿ ಸರ್ಕಾರವನ್ನು ಉರುಳಿಸಿದವರು ಯಾರು?

#MyPressConference
#Cauvery

20-20 ತಿಂಗಳ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡ ಕುಮಾರಸ್ವಾಮಿ, ತನ್ನ ಅಧಿಕಾರವಧಿ ಮುಗಿದ ನಂತರ ವಚನ ಪಾಲನೆ ಮಾಡದೆ ದ್ರೋಹ ಬಗೆದರು. ಆ ವಚನಭ್ರಷ್ಟತೆಯ ಒಂದೇ ಕಾರಣಕ್ಕಾಗಿ ಸಿಡಿದೆದ್ದ ರಾಜ್ಯದ ಜನ ಯಡಿಯೂರಪ್ಪನವರನ್ನು ಬೆಂಬಲಿಸಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

#MyPressConference
#Cauvery

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿದ್ದಾರೆ, ಕೋಮುವಾದಿ ಪಕ್ಷ ಮತ್ತೆ ಅಧಿಕಾರ ಹಿಡಿದಿದೆ ಎನ್ನುವುದಕ್ಕೆ ದೇವೇಗೌಡರಿಗೆ ಬೇಸರ ಇಲ್ಲ. ಅವರ ಚಿಂತೆ ತಮ್ಮ ಮತ್ತು ತಮ್ಮ ಮೊಮ್ಮಗನ ಸೋಲು ಮಾತ್ರ.

#MyPressConference
#Cauvery

ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿರುವುದು ದೇವೇಗೌಡರು ಮತ್ತು ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ. ರಾಜ್ಯದ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಸೋತಿದ್ದಾರೆ. ಆ ಎಲ್ಲ ಅಭ್ಯರ್ಥಿಗಳ ಸೋಲು ಗೌಡರನ್ನು ಕಾಡುವುದಿಲ್ಲ ಯಾಕೆ?

#MyPressConference
#Cauvery

ಜೆಡಿಎಸ್ ಪಕ್ಷದ ಮತದಾರರಿರುವ ಮೈಸೂರು,ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಯಾರು ಕಾರಣ? ಅಲ್ಲಿನ ಜೆಡಿಎಸ್ ಮತದಾರರೆಲ್ಲ ಯಾರಿಗೆ ಮತ ಹಾಕಿದ್ದಾರೆ? ಅವರೆಲ್ಲ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಹೇಳಿದವರು ಯಾರು? ಈ ಪ್ರಶ್ನೆಗಳಿಗೂ ಗೌಡರು ಉತ್ತರ ನೀಡಬೇಕಲ್ಲಾ?

#MyPressConference

ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಎಂಟು ಕ್ಷೇತ್ರಗಳು ಬೇಕೇಬೇಕು ಎಂದು ದೇವೇಗೌಡರು ಹಠ ಹಿಡಿದಿದ್ದು ತಾವು ಗೆಲ್ಲಲ್ಲಿಕ್ಕೋ? ಇಲ್ಲವೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿಕ್ಕೋ?

ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆಯೇ? ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿಲ್ಲ ಎಂದು ಜಿ.ಟಿ.ದೇವೇಗೌಡರು ಬಹಿರಂಗವಾಗಿ ಹೇಳಿದ್ದಾರಲ್ಲಾ? ದೇವೇಗೌಡರು ಯಾರ ವಿರುದ್ಧ ಕ್ರಮ ಕೈಗೊಂಡಿದ್ದಾರೆ?
#MyPressConference

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ವಿರುದ್ಧ ಮಾತನಾಡಿದ್ದು ನಿಜ. ಆ ಚುನಾವಣೆಯಲ್ಲಿ ಗೌಡರು, ಕುಮಾರಸ್ವಾಮಿಯವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆಯೇ? ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಎದುರಾಳಿಯೇ ಜೆಡಿಎಸ್. ಹಾಗಿದ್ದಾಗ ಜೆಡಿಎಸ್ ವಿರುದ್ದ ಮಾತನಾಡದೆ ಯಾರ ವಿರುದ್ಧ ಮಾತನಾಡಬೇಕಿತ್ತು?

ನಾನು ಒಕ್ಕಲಿಗ ವಿರೋಧಿ ಎಂಬಂತೆ ದೇವೇಗೌಡರು ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ನಾನು ಒಕ್ಕಲಿಗ ಸಮುದಾಯದ ವಿರೋಧಿ ಅಲ್ಲ. ಜೆಡಿಎಸ್ ನಲ್ಲಿ ಒಕ್ಕಲಿಗ ನಾಯಕರ ಜೊತೆಯಲ್ಲಿಯೇ ರಾಜಕೀಯ ಮಾಡುತ್ತಾ ಬಂದವನು. ಈಗಲೂ ನನ್ನ ಬಹಳಷ್ಟು ಸ್ನೇಹಿತರು ಒಕ್ಕಲಿಗ ಸಮುದಾಯವರೇ ಆಗಿದ್ದಾರೆ.

ಜೆಡಿಎಸ್ ವಿರೋಧಿಸಿದರೆ, ದೇವೇಗೌಡರನ್ನು ವಿರೋಧಿಸಿದರೆ ನಾನು ಹೇಗೆ ಒಕ್ಕಲಿಗ ವಿರೋಧಿಯಾಗುತ್ತೇನೆ? ಜೆಡಿಎಸ್ ಎನ್ನುವುದು ಒಕ್ಕಲಿಗರ ಪಕ್ಷವೇ? ತಮ್ಮ ವಿರೋಧಿಗಳನ್ನು ಒಕ್ಕಲಿಗ ವಿರೋಧಿ ಎಂದು ಸುಳ್ಳು ಆರೋಪ ಮಾಡುವ ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ.
#MyPressConference

ದೇವೇಗೌಡರು ರಾಜಕೀಯವಾಗಿ ನಾಶಮಾಡಿದವರ ಪಟ್ಟಿಯಲ್ಲಿ ಶೇಕಡಾ 90ರಷ್ಟು ಮಂದಿ ಒಕ್ಕಲಿಗರೇ ಆಗಿದ್ದಾರೆ. ಇದಕ್ಕೆಲ್ಲ ಗೌಡರು ಉತ್ತರ ಕೊಡುವುದಿಲ್ಲ. ಹೆಚ್ಚಿನ ಮಾಹಿತಿ ಬೇಕಾದರೆ ಈಗ ಬಿಜೆಪಿಯಲ್ಲಿರುವ ಬಚ್ಚೇಗೌಡರನ್ನು ಕೇಳಿ, ಅವರು ವಿವರವಾಗಿ ಹೇಳ್ತಾರೆ.

ಒಕ್ಕಲಿಗರಲ್ಲಿ ಯಾರಾದರೂ ಮುಖ್ಯಮಂತ್ರಿ, ಮಂತ್ರಿಯಾಗಿ ಬೆಳೆದಿದ್ದರೆ ಅದು ಕಾಂಗ್ರೆಸ್‌ನಲ್ಲಿ ಮಾತ್ರ. ಕೆಂಗಲ್ ಹನುಮಂತಯ್ಯ, ಎಸ್.ಎಂ.ಕೃಷ್ಣ ಅವರಿಂದ ಈಗ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡರವರೆಗೆ ಒಕ್ಕಲಿಗ ನಾಯಕರನ್ನು ಬೆಳೆಸಿದ್ದು ಕಾಂಗ್ರೆಸ್. ಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಟ್ಟು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ?

1996ರಲ್ಲಿ, 2004ರಲ್ಲಿ ಏನಾಯಿತು ಎನ್ನುವುದನ್ನು ಹಿಂದೆಯೇ ಹೇಳಿದ್ದೇನೆ. ನಾನು ಮುಖ್ಯಮಂತ್ರಿ ಆಗಬಾರದೆಂದು ದೇವೇಗೌಡರು ಮತ್ತು ಕುಮಾರ ಸ್ವಾಮಿಯವರು ಏನೆಲ್ಲಾ ಮಾಡಿದರು ಎನ್ನುವುದು ಜನರಿಗೆ ತಿಳಿದಿದೆ. ವಿಧಾನಸಭೆಯಲ್ಲಿಯೇ ಈ ಬಗ್ಗೆ ಮಾತನಾಡಿದ್ದೇನೆ, ಕುಮಾರಸ್ವಾಮಿವಯರೇ ಇದನ್ನೆಲ್ಲ ಒಪ್ಪಿಕೊಂಡಿದ್ದಾರೆ. ಇದು ವಿಧಾನಸಭೆಯ ದಾಖಲೆಯಲ್ಲಿದೆ.

ಈಗ ದೇವೇಗೌಡರು ಇದ್ದಕ್ಕಿದ್ದ ಹಾಗೆ ಆರೋಪಗಳ ಸುರಿಮಳೆಗೈಯ್ಯಲು ಕಾರಣಗಳೇನು ಎನ್ನುವುದು ತಿಳಿಯದಷ್ಟು ನಾನು ದಡ್ಡನಲ್ಲ. ಇದರಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ ಎನ್ನುವುದು ಮುಂದೆ ಹೇಳ್ತೇನೆ. ನಾನೇನಾದರೂ ವಿರೋಧಪಕ್ಷದ ನಾಯಕರಾಗಿಬಿಟ್ಟರೆ ಹೇಗೆ ಎಂಬ ಚಿಂತೆಯಿಂದ ಗೌಡರು ಈಗ ಹೊಸ ನಾಟಕ ಶುರು ಮಾಡಿದ್ದಾರೆ.

ತನ್ನನ್ನು ಪ್ರಧಾನಿ ಮಾಡಲು ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆದವರು ದೇವೇಗೌಡರು. ಆಗಿನ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರ ವಿರುದ್ಧದ ಹಳೆ ಪ್ರಕರಣವನ್ನು ಹುಡುಕಿ ಅವರನ್ನೇ ಜೈಲಿಗೆ ಕಳುಹಿಸುವ ಸಂಚು ಮಾಡಿದವರು ದೇವೇಗೌಡರು. ಇವೆಲ್ಲ ದೇವೇಗೌಡರ ಹಳೆಯ ಆಟ.

ಲಿಂಗಾಯತ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಹೀಗೆ ನನ್ನನ್ನು ತಪ್ಪಾಗಿ ಬಿಂಬಿಸಿದ್ದೆ ಹೆಚ್ಚು. 5 ವರ್ಷದ ನನ್ನ ಕಾರ್ಯಕ್ರಮ ಎಲ್ಲ ಜಾತಿ, ಧರ್ಮಗಳನ್ನು ಮೀರಿ ವಿಸ್ತರಿಸಿದೆ. ನನಗೆ ಸರ್ಟಿಫಿಕೇಟ್ ಕೊಡುವುದು ಜನರೇ ಹೊರತು, ದೇವೇಗೌಡರಲ್ಲ.
ಬಿಜೆಪಿಯನ್ನು ಮೆಚ್ಚಿಸಲು ದೇವೇಗೌಡರು ನನ್ನ ಮೇಲೆ ಸುಳ್ಳು ಆರೋಪ ಮಾಡಿರಬಹುದು.

Share this Scrolly Tale with your friends.

A Scrolly Tale is a new way to read Twitter threads with a more visually immersive experience.
Discover more beautiful Scrolly Tales like this.

Keep scrolling