, 17 tweets, 3 min read
ಏಷ್ಯಾದ ಹತ್ತು ಅಸಿಯಾನ್ ದೇಶಗಳು ಮತ್ತು ಅಸ್ಟ್ರೇಲಿಯಾ, ಭಾರತ, ಚೀನಾ, ಜಪಾನ್, ಕೊರಿಯಾ ಮತ್ತು ನ್ಯೂಜಿಲೆಂಡ್ ದೇಶಗಳ ನಡುವೆ ‘’ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ( RCEP)ದ ಅಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA)ದ ಬಗ್ಗೆ ಮಾತುಕತೆಗಳು ಅಂತಿಮ ಹಂತದಲ್ಲಿದೆ.
#WeOpposeRCEP
ಇದೇ ನವೆಂಬರ್ 4ರಂದು ಅಂತಿಮ ಸಹಿ ಬೀಳುವ ನಿರೀಕ್ಷೆ ಇದ್ದು, ಒಪ್ಪಂದವಾದರೆ ಈ ಗುಂಪಿನ 16 ದೇಶಗಳು ಶೇಕಡಾ 80ರಿಂದ 90ರಷ್ಟು ಸರಕುಗಳನ್ನು ಯಾವುದೇ ಆಮದು ಸುಂಕ ಇಲ್ಲದೆ/ಕಡಿಮೆ ಆಮದು ಸುಂಕ ತೆತ್ತು ಆಮದು ಮಾಡಿಕೊಳ್ಳಬಹುದು. ಈ ಒಪ್ಪಂದ ಮುಂದಿನ ದಿನಗಳಲ್ಲಿ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕವನ್ನು ಶಾಶ್ವತವಾಗಿ ಶೂನ್ಯಕ್ಕೆ ತರುತ್ತದೆ.
ಈ ಗುಂಪಿನಲ್ಲಿರುವ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತಕ್ಕೆ ರಫ್ತು ಮಾಡುತ್ತವೆ. ಇದರಿಂದಾಗಿ ಕೇವಲ ಹೈನುಗಾರಿಕೆ ಮಾತ್ರವಲ್ಲ, ಗದ್ದೆಯ ಮತ್ತು ತೋಟದ ಬೆಳೆಗಳು, ಸಾಂಬಾರ ಪದಾರ್ಥಗಳು ಹೀಗೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳ ಮೇಲೆಯೂ ಒಪ್ಪಂದ ಪರಿಣಾಮ ಬೀರಲಿದೆ.
ಲಭ್ಯವಿರುವ ಮಾಹಿತಿ ಪ್ರಕಾರ ಮುಕ್ತ ವ್ಯಾಪಾರ ಒಪ್ಪಂದದಿಂದ ದೊಡ್ಡ ಪ್ರಮಾಣದಲ್ಲಿ ಬಾದಿತವಾಗುವುದು ಹೈನುಗಾರಿಕೆ. ಪ್ರಸ್ತುತ ನಮ್ಮ ದೇಶದಲ್ಲಿ ಉಳಿದೆಲ್ಲ ದೇಶಗಳಿಗಿಂತ ಹೆಚ್ಚು ಅಂದರೆ ಸುಮಾರು ಒಂದೂವರೆ ಕೋಟಿ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿವೆ.
ನಮ್ಮ ರಾಜ್ಯದಲ್ಲಿಯೇ ಪ್ರತಿದಿನ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಮ್ಮ ಲಕ್ಷಾಂತರ ಸಣ್ಣ ರೈತರು ವಿಶೇಷವಾಗಿ ಮಹಿಳೆಯರ ಜೀವನೋಪಾಯಕ್ಕೆ ಹೈನುಗಾರಿಕೆ ದಾರಿಯಾಗಿದೆ. ನ್ಯೂಜಿಲೆಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಆರ್‌ಸಿಇಪಿ ನಮ್ಮ ರೈತರನ್ನು ಬೀದಿಪಾಲು ಮಾಡಲಿದೆ.
ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿಹಾಕಿದರೆ ವಿಶ‍್ವದ ಅನೇಕ ಬಹುರಾಷ್ಟ್ರೀಯ ಕಂಪೆನಿಗಳು ನೇರವಾಗಿ ಇಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲಿವೆ. ಇದರಿಂದಾಗಿ ಸಹಕಾರಿ ಕ್ಷೇತ್ರದಲ್ಲಿ ಯಶಸ್ವಿಯಾಗಿರುವ ನಮ್ಮ ಹಾಲಿನ ಒಕ್ಕೂಟಗಳು ನಾಶವಾಗಲಿವೆ. ನಮ್ಮ ಅಸಹಾಯಕ ರೈತರು ಈ ವಿದೇಶಿ ಕಂಪೆನಿಗಳ ಜೀತದಾರರಾಗಲಿದ್ದಾರೆ.
ಭಾರತದಲ್ಲಿ ಹಸು-ಎಮ್ಮೆಗಳನ್ನು ಮನೆ ಸದಸ್ಯರಂತೆ ಲಾಲನೆ-ಪಾಲನೆ ಮಾಡುತ್ತಾರೆ. ಗೋವನ್ನು ದೇವರೆಂದು ಪೂಜಿಸುತ್ತೇವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪರಿವಾರದ ನಾಯಕರು ಗೋವುಗಳನ್ನು ಪ್ರೀತಿ-ಕಾಳಜಿಯಿಂದ ಸಾಕುತ್ತಿರುವುದಕ್ಕಾಗಿ ಅವರನ್ನು ಶಿಕ್ಷಿಸಲು ಹೊರಟಿದೆಯೇ?
ಹೊಸ ಒಪ್ಪಂದ ನಮ್ಮ ಬೆಳೆಗಳ ಬೀಜದ ಮೇಲೆಯೂ ಪರಿಣಾಮ ಬೀರಲಿದೆ. ಬೀಜ ಕಂಪನಿಗಳು ತಮ್ಮ ಬೌದ್ಧಿಕ ಆಸ್ತಿ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತದೆ ಮತ್ತು ಬೀಜಗಳನ್ನು ಉಳಿಸಿ ವಿನಿಮಯ ಮಾಡಿಕೊಳ್ಳುವಾಗ ರೈತರು ಅಪರಾಧಿಗಳಾಗುತ್ತಾರೆ .
ಈ ಒಪ್ಪಂದದ ಇನ್ನೊಂದು ಅಪಾಯಕಾರಿ ಷರತ್ತು ವ್ಯಾಜ್ಯ ಇತ್ಯರ್ಥಕ್ಕಾಗಿ ಇರುವ ಹೂಡಿಕೆದಾರರು ಮತ್ತು ಸಂಬಂಧಿತ ದೇಶಗಳ ನಡುವಿನ ವ್ಯಾಜ್ಯ ಇತ್ಯರ್ಥ ವ್ಯವಸ್ಥೆ ( ಐಎಸ್ ಡಿಎಸ್). ಯಾವುದೇ ದೇಶದೊಂದಿಗೆ ಹೂಡಿಕೆದಾರರಿಗೆ ವ್ಯಾಜ್ಯ ಉಂಟಾದರೆ ಅದನ್ನು ಐಎಸ್‌ಡಿಎಸ್ ಮೂಲಕ ಬಗೆಹರಿಸಿಕೊಳ್ಳಬೇಕಾಗುತ್ತದೆ.
ಇದು ನಮ್ಮ ದೇಶದ ನ್ಯಾಯಾಲಯಗಳನ್ನು ಬೈಪಾಸ್ ಮಾಡಿ ಖಾಸಗಿ ಮಧ್ಯಸ್ತಿಕೆದಾರರ ಮೂಲಕ ವ್ಯಾಜ್ಯ ಇತ್ಯರ್ಥ ಮಾಡುವ ವ್ಯವಸ್ಥೆ. ಇದು ವಿಶ್ವಸಂಸ್ಥೆ ಇಲ್ಲವೇ ವಿಶ್ವಬ್ಯಾಂಕ್ ಕೇಂದ್ರಗಳಲ್ಲಿ ನಡೆಯಲಿದೆ. ನಮ್ಮ ಬಡ ರೈತರು ನ್ಯಾಯ ಕೇಳಲು ಅಲ್ಲಿಗೆ ಹೋಗಲು ಸಾಧ‍್ಯವೇ? ನಮ್ಮ ರೈತರ ಪರವಾಗಿ ನಮ್ಮ ಸರ್ಕಾರಗಳು ಎಷ್ಟು ಆಸಕ್ತಿಯಿಂದ ಆ ಕೆಲಸ ಮಾಡಲು ಸಾಧ್ಯ?
ಈ ಒಪ್ಪಂದದಲ್ಲಿ ಉಳಿದೆಲ್ಲ ದೇಶಗಳಿಗಿಂತ ಚೀನಾ ಸೇರಿಕೊಂಡಿರುವುದು ಭಾರತದ ಚಿಂತೆಗೆ ಕಾರಣವಾಗಿದೆ. ಒಂದೆಡೆ ಚೀನಾ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಅಮೆರಿಕದ ಜೊತೆ ಸಂಘರ್ಷದಲ್ಲಿ ತೊಡಗಿದೆ. ಚೀನಾದ ಜೊತೆ ಭಾರತ ಮುಕ್ತ ವ್ಯಾಪಾರದ ಒಪ್ಪಂದವೇರ್ಪಟ್ಟರೆ ಭಾರತ ಅನಿವಾರ್ಯವಾಗಿ ಅಮೆರಿಕ ವಿರೋಧಿ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ.
ಈಗಾಗಲೇ ಅಗ್ಗದ ಬೆಲೆಯ ವಸ್ತುಗಳು ಚೀನಾ ದೇಶದಿಂದ ಆಮದಾಗುತ್ತಿರುವುದರಿಂದ ದೇಶದ ಸಣ್ಣ ಮತ್ತು ಬೃಹತ್ ಉದ್ಯಮಗಳು, ಗುಡಿಕೈಗಾರಿಕೆಗಳು, ಕೃಷಿ ಕ್ಷೇತ್ರ ಅನಾರೋಗ್ಯಕರವಾದ ಪೈಪೋಟಿ ಎದುರಿಸಿ ನಾಶವಾಗುತ್ತಿವೆ. ಲಭ್ಯ ಇರುವ ಮಾಹಿತಿ ಪ್ರಕಾರ ಆರ್‌ಸಿಇಪಿ ಒಪ್ಪಂದ ನಡೆದರೆ ಚೀನಾದ ಶೇಕಡಾ 80ರಷ್ಟು ಉತ್ಪನ್ನಗಳ ಮೇಲಿನ ಆಮದು ಸುಂಕ ಕಡಿಮೆಯಾಗಲಿದೆಯಂತೆ.
2001-02ರಲ್ಲಿ ಭಾರತ-ಚೀನಾ ನಡುವೆ ವ್ಯಾಪಾರ ಪ್ರಾರಂಭವಾದ ದಿನದಿಂದ 2018-19ರ ವರೆಗೆ ಭಾರತ ನಿರಂತರವಾಗಿ ವ್ಯಾಪಾರ ಕೊರತೆಯನ್ನು ಅನುಭವಿಸುತ್ತಾ ಬಂದಿದೆ.
ಉದಾಹರಣೆಗೆ 2001-02ರಲ್ಲಿ ಒಂದು ಶತಕೋಟಿ ಡಾಲರ್ ಇದ್ದ ವ್ಯಾಪಾರಿ ಕೊರತೆ, 2017-18ರ ಹೊತ್ತಿಗೆ 63 ಶತಕೋಟಿ ಡಾಲರ್‌ಗೆ ಏರಿದೆ.
ಪ್ರಜಾಪ್ರಭುತ್ವ ದೇಶದಲ್ಲಿ ಸರ್ಕಾರವು ತನ್ನ ನೀತಿ-ನಿರ್ಧಾರಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡು ಬರಬೇಕಾಗುತ್ತದೆ. ಕೋಟ್ಯಂತರ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ಮಹತ್ವದ ವ್ಯಾಪಾರಿ ಒಪ್ಪಂದದ ವಿವರವನ್ನು ಸಾರ್ವಜನಿಕ ಚರ್ಚೆಗೆ ಬಿಡದೆ ಗೌಪ್ಯತೆಯನ್ನು ಕಾಪಾಡಿಕೊಂಡು ಬರುತ್ತಿರುವುದು ಹಲವಾರು ಬಗೆಯ ಗುಮಾನಿಗಳಿಗೆ ಕಾರಣವಾಗಿದೆ.
ಇನ್ನು ಕೆಲವೇ ದಿನಗಳಲ್ಲಿ ಅಂದರೆ ನವಂಬರ್ 4 ರಂದು ಈ ಒಪ್ಪಂದಕ್ಕೆ ಭಾರತ ಕೂಡ ಸಹಿ ಹಾಕಬೇಕಾಗಿದೆ. ಅದಕ್ಕಿಂತ ಮೊದಲು ಒಪ್ಪಂದದ ಕರಡನ್ನು ಬಹಿರಂಗಗೊಳಿಸಬೇಕು ಮತ್ತು ರೈತರು, ವ್ಯಾಪಾರಿಗಳು, ಉದ್ಯಮಿಗಳು ಹೀಗೆ ಈ ಒಪ್ಪಂದಕ್ಕೆ ಬದ್ಧವಾಗಿರಬೇಕಾದ ಎಲ್ಲ ಪಾಲುದಾರರ ಜೊತೆ ಕೇಂದ್ರ ಸರ್ಕಾರ ಚರ್ಚೆ ನಡೆಸಬೇಕು.
ಯುಪಿಎ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆದರೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತಾಸಕ್ತಿ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ನರೇಂದ್ರಮೋದಿಯವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ.
ಎಲ್ಲಿದೆ ಪಾರದರ್ಶಕತೆ?
ಭಾರತೀಯ ರೈತರನ್ನು ಮತ್ತೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದು ಖಂಡಿತ ನಮ್ಮ ರೈತರ ಹಿತಾಸಕ್ತಿಗೆ ವಿರುದ್ಧವಾದುದು.

ಆರ್‌ಸಿಇಪಿ ಒಪ್ಪಂದ ನಡೆಯದಂತೆ ಇಡೀ ದೇಶ ಹೋರಾಟ ನಡೆಸಬೇಕಾದ ಅಗತ್ಯ ಇದೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು.
Missing some Tweet in this thread? You can try to force a refresh.

Enjoying this thread?

Keep Current with Siddaramaiah

Profile picture

Stay in touch and get notified when new unrolls are available from this author!

Read all threads

This Thread may be Removed Anytime!

Twitter may remove this content at anytime, convert it as a PDF, save and print for later use!

Try unrolling a thread yourself!

how to unroll video

1) Follow Thread Reader App on Twitter so you can easily mention us!

2) Go to a Twitter thread (series of Tweets by the same owner) and mention us with a keyword "unroll" @threadreaderapp unroll

You can practice here first or read more on our help page!

Follow Us on Twitter!

Did Thread Reader help you today?

Support us! We are indie developers!


This site is made by just three indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!