ಬೆಂಗಳೂರು, ದಿನಾಂಕ: 23.03.2020
• ಕೋವಿಡ್ 19 ಅನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವಂತೆ ಖಾಸಗಿ ಆಸ್ಪತ್ರೆಗಳು, ತಜ್ಞ ವೈದ್ಯರು ಹಾಗೂ ಪರಿಣತರನ್ನು ಮನವಿ ಮಾಡಿದ್ದೇನೆ.
• ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದ ದೊಡ್ಡ ಸಂಖ್ಯೆಯ ಜನರನ್ನು ಕ್ವಾರಂಟೈನ್ ನಲ್ಲಿ ಇಡುವುದೇ ದೊಡ್ಡ ಸವಾಲಾಗಿದೆ.
• ಅವರು ಸಂಪೂರ್ಣ ಶಟ್ ಡೌನ್ ಮಾಡುವುದೇ ಪರಿಹಾರ ಎಂದು ಸಲಹೆ ನೀಡಿದರು.
• ಖಾಸಗಿ ಆಸ್ಪತ್ರೆಯವರು ಶೇ. 50 ರಷ್ಟು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನು ಒದಗಿಸುವ ಭರವಸೆ ನೀಡಿದ್ದಾರೆ.
• ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1200 ಹಾಸಿಗೆಗಳ ಪ್ರತ್ಯೇಕ ಬ್ಲಾಕ್ ಗುರುತಿಸುವ ಜೊತೆಗೆ ಖಾಸಗಿ ಆಸ್ಪತ್ರೆಯೊಂದನ್ನು ಸಹ ಗುರುತಿಸಲು ಸಹಕರಿಸುವುದಾಗಿ ತಿಳಿಸಿದ್ದಾರೆ.
• ಕೋವಿಡ್ 19 ಅನ್ನು ತಡೆಯಲು, ಸರ್ಕಾರ-ಖಾಸಗಿ ಸಹಭಾಗಿತ್ವವನ್ನು ಬಲಪಡಿಸಲು ತೀರ್ಮಾನಿಸಲಾಯಿತು.
•ಸರ್ಕಾರ ಕೋವಿಡ್ 19 ತಡೆಯುವುದರೊಂದಿಗೆ ಸೋಂಕಿತರ ಚಿಕಿತ್ಸೆಗೂ ಪೂರ್ವ ಸಿದ್ಧತೆ ನಡೆಸುತ್ತಿದೆ.
• ನಗರ ಪ್ರದೇಶದಲ್ಲಿ ವಾಸವಾಗಿರುವ ಜನರಿಗೆ ನಮ್ಮ ಕಳಕಳಿಯ ಮನವಿ- ದಯವಿಟ್ಟು ಇನ್ನೂ ಕೋವಿಡ್ ಸೋಂಕು ಮುಕ್ತವಾಗಿರುವ ಹಳ್ಳಿಗಳಿಗೆ ತೆರಳಬೇಡಿ. ಕೋವಿಡ್ 19 ಹರಡುವುದನ್ನು ತಡೆಯಲು ಸರ್ಕಾರದೊಂದಿಗೆ ಸಹಕರಿಸಿ, ಮನೆಯಿಂದ ಹೊರ ಬರಬೇಡಿ.
• ರಾಜ್ಯಾದ್ಯಂತ ಮಾರ್ಚ್ 31ರ ವರೆಗೆ ಮೊನ್ನೆ ತಿಳಿಸಿದ 9 ಜಿಲ್ಲೆಗಳಲ್ಲಿ ಸೆಕ್ಷನ್ 144ನ್ನು ಮುಂದುವರೆಸಲಾಗುವುದು.
• ಸಾರಿಗೆ ಮತ್ತು ಗೃಹ ಇಲಾಖೆಯ ಸಭೆ ನಡೆಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.
• ಹೋಮ್ ಕ್ವಾರಂಟೈನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ತೀರ್ಮಾನಿಸಲಾಯಿತು
• ಬೆಂಗಳೂರು ಕರಗ ಉತ್ಸವ ನಡೆಸಲು ಅವಕಾಶ ಇಲ್ಲ.
• ದೇವಾಲಯ, ಪ್ರಾರ್ಥನಾಲಯಗಳಲ್ಲಿ ಗುಂಪು ಸೇರುವಂತಿಲ್ಲ.
• ಟೆಲಿಕನ್ಸಲ್ಟೇಶನ್ ಗೆ ಅವಕಾಶ ನೀಡಲಾಗವುದು, ಚಿಕಿತ್ಸೆ – ಸಲಹೆಗೆ ಹೊರಬರುವ ಅಗತ್ಯ ಇಲ್ಲ.