ಜೀವ ಪೀಠನ ಪಿತನೆ ಜಗಕತಿ
ಪಾವನನೆ ಸನಕಾದಿ ಸಜ್ಜನನಿಕರ ದಾತಾರ||
ರಾವಾಣಾಸುರ ಮಥನ ಶ್ರವಣ ಸು
ಧಾ ವಿನೂತನ ಕಥನ ಕಾರಣ
ಕಾವುದಾನತ ಜನವ ಗದುಗಿನ ವೀರನಾರಯಣ ||೧||
#Kumaravyasa #Bharata #Peethaka #Sandhi #ಕುಮಾರವ್ಯಾಸ #ಭಾರತ #ಮಂಗಳಾಚರಣೆ #ಕಾವ್ಯವಾಚನ #ಗಮಕವಾಚನ #ಕಾವ್ಯನಾಟ್ಯ #Kavyanatya
RT pls 🙏
ಸರಸಿಜಾರಿಯ ಕಿರಣದೋಳಿಯ
ವಿರಚಿಸಿದ ಸಿಂಧೂರಭಾಳದಿ ಕುಣಿವ ಕುಂತಳದ ||
ಕರಿ ನಿಭಾಕೃತಿಯೆನಿಪ ವದನದ
ಕರದ ಪಾಶದ ಮೋದಕದ ವಿ
ಸ್ತರದ ಗಣಪತಿ ಮಾಡೆಮಗೆ ನಿರ್ವಿಘ್ನದಾಯಕವ ||೩||
#Kumaravyasa #Bharata #Peethaka #Sandhi #ಕುಮಾರವ್ಯಾಸ #ಭಾರತ #ಮಂಗಳಾಚರಣೆ #ಕಾವ್ಯವಾಚನ #ಗಮಕವಾಚನ #ಕಾವ್ಯನಾಟ್ಯ #Kavyanatya
ಚಾರದುದ್ಭವೆ ವಚನರಚನೋ
ದ್ಧಾರೆ ಶ್ರುತಿ ಪೌರಾಣದಾಗಮ ಸಿದ್ದಿದಾಯಕಿಯೆ
ಶೌರಿ ಸುರಪತಿ ಸಕಲ ಮುನಿಜನ
ಸೂರಿಗಳಿಗನುಪಮದ ಯುಕುತಿಯೆ
ಶಾರದೆಯೆ ನರ್ತಿಸುಗೆ ನಲಿದೊಲಿದೆನ್ನ ಜಿಹ್ವೆಯಲಿ||೫||
#Kumaravyasa #Bharata #ಕುಮಾರವ್ಯಾಸ #ಭಾರತ #ಮಂಗಳಾಚರಣೆ #ಕಾವ್ಯವಾಚನ #ಗಮಕವಾಚನ #ಕಾವ್ಯನಾಟ್ಯ #Kavyanatya #Saraswati
ಪರಮವೇದದ ಸಾರ ಯೋಗೀ-
ಶ್ವರರ ತತ್ತ್ವ ವಿಚಾರ ಮಂತ್ರಿ ಜನಕ್ಕೆ ಬುದ್ಧಿಗುಣ
ವಿರಹಿಗಳ ಶೃಂಗಾರ ವಿದ್ಯಾ
ಪರಿಣತರಲಂಕಾರ ಕಾವ್ಯಕೆ
ಗುರುವೆನಲು ರಚಿಸಿದ ಕುಮಾರವ್ಯಾಸ ಭಾರತವ!
#ಕುಮಾರವ್ಯಾಸ #Bharata #Gamakavachana #Mangalacharana #Kumaravyasa
ವೇದ ಪುರುಷನ ಸುತನ ಸುತನ ಸ
ಹೋದರನ ಹೆಮ್ಮಗನ ಮಗನ ತ
ಳೋದರಿಯ ಮಾತುಳನ ರೂಪನನತುಳ ಭುಜ ಬಲದಿ |
ಕಾದಿ ಗೆಲಿದನಣ್ಣನವ್ವೆಯ
ನಾದಿನಿಯ ಜಠರದಲಿ ಜನಿಸಿದ
ನಾದಿ ಮೂರುತಿ ಸಲಹೊ ಗದುಗಿನ ವೀರನಾರಯಣ || ೨೩ ||