ಹುಟ್ಟಿದ್ದು ಶಿರಸಿಯಲ್ಲಿ, ಬೆಳೆದಿದ್ದು ಬೆಳಗಾವಿಯಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ರಾಷ್ಟ್ರಾದ್ಯಂತ ನಿಧಿ ಸಮರ್ಪಣಾ ಕಾರ್ಯವೂ ಸಾಗಿದೆ.
ಇದೀಗ ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹೊಣೆಯನ್ನು ವಿಶ್ವಹಿಂದೂ ಪರಿಷತ್ ಸಂಘಟನಾ ಮಂತ್ರಿ ಗೋಪಾಲಜಿ ಅವರಿಗೆ ವಹಿಸಲಾಗಿದೆ. ಅವರು ಅಯೋಧ್ಯೆಯಲ್ಲೇ ಉಳಿದು ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಇಷ್ಟಕ್ಕೂ ಗೋಪಾಲ ಜೀ ಯಾರು?
ಗೋಪಾಲ ಜೀ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ಹೊಸ್ತೋಟದ ನಾಗರಕಟ್ಟೆ ಮನೆತನದ ಮಹಾಬಲೇಶ್ವರ ಭಟ್ ಮತ್ತು ಅನ್ನಪೂರ್ಣ ದಂಪತಿಯ 6ನೇ ಪುತ್ರ.
ಪಿಯುಸಿ ಓದುತ್ತಿರುವಾಗಲೇ ಆರ್ ಎಸ್ಎಸ್ ಶಾಖೆ ನಡೆಸುತ್ತಿದ್ದ ಗೋಪಾಲ ಜೀ, ಬೆಳಗಾವಿಯ ಆರ್ ಎಲ್ ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದ್ದಾರೆ. ಎಂಎಸ್ ಸಿಯಲ್ಲಿ ಬಂಗಾರದ ಪದಕ ಪಡೆದು ಉತ್ತೀರ್ಣರಾದ ಅವರಿಗೆ ಅಮೇರಿಕಾದ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಆಫರ್ ಬಂದಿತ್ತು. ಆದರೆ ಅಲ್ಲಿಗೆ ತೆರಳದೆ ಸಂಘದ ವಿವಿಧ ಸ್ತರದ ಜವಾಬ್ದಾರಿಯನ್ನು ನಿಭಾಯಿಸಿ
ಈಗ ವಿಶ್ವಹಿಂದೂ ಪರಿಷದ್ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಆರಂಭಿಸಿದ್ದಾರೆ. ಕಳೆದ 37 ವರ್ಷದಿಂದಲೂ ಸಂಘ ಮತ್ತು ವಿಶ್ವಹಿಂದೂ ಪರಿಷದ್ ನಲ್ಲಿ ಪೂರ್ಣಾವಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
1984ರಲ್ಲಿ ಮೈಸೂರು ತಾಲೂಕು ಪ್ರಚಾರಕರಾಗಿ ಸೇವೆ ಆರಂಭಿಸಿ, ನಂತರ ಬೆಳಗಾವಿ ಜಿಲ್ಲಾ ಪ್ರಚಾರಕರಾಗಿ ಕೆಲಸ ಮಾಡಿದರು. ಗುಲಬರ್ಗಾ ವಿಭಾಗ ಪ್ರಚಾರಕರಾಗಿ, ಉತ್ತರ ಕರ್ನಾಟಕ ಪ್ರಾಂತ (17 ಜಿಲ್ಲೆ) ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ಹುಬ್ಬಳ್ಳಿಯಲ್ಲಿ 20 ಸಾವಿರ ಸ್ವಯಂ ಸೇವಕರನ್ನು ಸೇರಿಸಿ ಹಿಂದೂ ಶಕ್ತಿ ಸಂಗಮ ಕಾರ್ಯಕ್ರಮದ ರೂವಾರಿ
5 ವರ್ಷದಿಂದ ವಿಶ್ವಹಿಂದೂ ಪರಿಷತ್ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಂಘಟನಾ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈಚೆಗೆ ಅವರನ್ನು ಗುಜರಾತ್, ರಾಜಸ್ಥಾನ ರಾಜ್ಯಗಳ ಒಟ್ಟೂ 6 ಪ್ರಾಂತಗಳ ಸಂಘಟನಾ ಮಂತ್ರಿಯಾಗಿ ನೇಮಕಮಾಡಲಾಗಿತ್ತು. ಗುಜರಾತ್ ಒಂದೇ ರಾಜ್ಯದಲ್ಲಿ ರಾಮಮಂದಿರ ನಿರ್ಮಾಣಕ್ಕೆ 394 ಕೋಟಿ ರೂ. ನಿಧಿ ಸಂಘ್ರಹಿಸುವ ಮೂಲಕ ಗಮನ ಸೆಳೆದಿದ್ದಾರೆ.
ಇದೀಗ ಗೋಪಾಲ ಜೀ ಅವರಿಗೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪೂರ್ಣಗೊಳ್ಳುವವರೆಗೂ ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ವಹಿಸಲಾಗಿದೆ.
ಬೆಳಗಾವಿಯ ಟೇಲರ್ ಮತ್ತು ರೆಡಿಮೇಡ್ ಅಂಗಡಿಯ ಮಾಲಿಕ, ವಿಶ್ವಹಿಂದೂ ಪರಿಷತ್ ಉತ್ತರ ಕರ್ನಾಟಕ ಪ್ರಾಂತ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಗೋಪಾಲ ಜೀ ಅವರ ಸಹೋದರರಲ್ಲಿ ಒಬ್ಬರು
ಜೈ ಶ್ರೀರಾಮ 🕉️🚩🎪🙏
• • •
Missing some Tweet in this thread? You can try to
force a refresh