ಕೋವಿಡ್ 19 ಹರಡುವಿಕೆ ತಡೆಗಟ್ಟಲು ಮೇ 10 ಬೆಳಿಗ್ಗೆ 6 ರಿಂದ ಮೇ 24 ಬೆಳಿಗ್ರಗೆ 6ಗಂಟೆಯವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್- ರಾಜ್ಯಸರ್ಕಾರದಿಂದ ಆದೇಶ #KarnatakaFightsCorona
ಈ ಅವಧಿಯಲ್ಲಿ ಬಸ್, ಮೆಟ್ರೋರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚಾರಕ್ಕೆ ಅವಕಾಶ. ಟ್ಯಾಕ್ಸಿ, ಆಟೋರಿಕ್ಷಾ ತುರ್ತು ಸಂದರ್ಭದಲ್ಲಿ ಸಂಚರಿಸಲು ಅನುಮತಿ. ಶಾಲಾ, ಕಾಲೇಜು, ಕೋಚಿಂಗ್ ಸಂಸ್ಥೆಗಳ ತರಗತಿಗಳು ಬಂದ್. ಹೋಟಲ್ ಗಳಿಗೆ ಪಾರ್ಸಲ್, ಹೋಮ್ ಡೆಲಿವರಿ ಮಾಡಲು ಮಾತ್ರ ಅನುಮತಿ.
ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.
ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳಿಗೆ ನಿಷೇಧ.
ಲಾಕ್ ಡೌನ್ ವೇಳೆ ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ಕಚೇರಿಗಳಿಗೆ ಕಾರ್ಯ ನಿರ್ವಹಿಸಲು ಅನುಮತಿ.
ಅವಕಾಶವಿರುವ ಚಟುವಟಿಕೆಗಳು:
➡️ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ.
➡️ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ.
➡️ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸಲು ಅವಕಾಶ
➡️ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯ
➡️ಸ್ಥಳದಲ್ಲಿಯೇ ಕಾರ್ಮಿಕರು/ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಲು ಅವಕಾಶ
➡️ಐಟಿ, ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
➡️ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ.
➡️ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ.
➡️ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ
➡️ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.
➡️ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.
• • •
Missing some Tweet in this thread? You can try to
force a refresh