ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗಲೇ ರಾತ್ರೋರಾತ್ರಿ ʼಭಯೋತ್ಪಾದಕ ದಾಳಿʼ ನಡೆಸಿ ಹಿಂಸಾಕಾಂಡ ಸೃಷ್ಟಿಸಿದ್ದ, ನಮ್ಮ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಎಂಇಎಸ್‌ ಕಿರಾತಕರ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಮೃದುದೋರಣೆ ತಾಳಿದೆ ಎನ್ನುವುದು ನನ್ನ ನೇರ ಆರೋಪ.1/8
#ಎಂಇಎಸ್‌_ನಿಷೇಧಿಸಿ
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ನಿಷೇಧಿಸಿ ಎಂದು ಇಡೀ ಕರ್ನಾಟಕವೇ ಒಕ್ಕೊರಲಿನಿಂದ ಆಗ್ರಹ ಮಾಡಿತ್ತು. ಬಿಜೆಪಿ ಸರಕಾರ ಅಸಡ್ಡೆ ತೋರಿದ ಪರಿಣಾಮ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಭಾಷೆ-ಭಾಷೆಗಳ ಜನರ ನಡುವೆ ಬೆಂಕಿ ಹಚ್ಚುವ ಇವರು ಭಯೋತ್ಪಾದಕರು. 2/8
#ಎಂಇಎಸ್‌_ನಿಷೇಧಿಸಿ
ಮಹಾರಾಷ್ಟ್ರ ದಿನದ ನೆಪದಲ್ಲಿ ಎಂಇಎಸ್‌ ಪುಂಡರು ನಾಡದ್ರೋಹ ಎಸಗಿದ್ದಾರೆ. ಕರ್ನಾಟಕದಲ್ಲೇ ಇದ್ದು ಕನ್ನಡ ನೆಲದ ವಿರುದ್ಧ ವಿಧ್ವಂಸಕ ಕೃತ್ಯ ಎಸಗಿರುವ ಶುಭಂ ಶೆಳಕೆ ಎಂಬ ಧೂರ್ತನು ಫೇಸ್‌ಬುಕ್‌ನಲ್ಲಿ ರಾಜ್ಯವನ್ನು ಒಡೆಯುವ ಸಂದೇಶ ಪೋಸ್ಟ್‌ ಮಾಡಿದ್ದಾನೆ. ವಿಡಿಯೋ ಮೂಲಕ ಕನ್ನಡಿಗರನ್ನು ಕೆಣಕಿದ್ದಾನೆ. 3/8
#ಎಂಇಎಸ್‌_ನಿಷೇಧಿಸಿ
ಕರ್ನಾಟಕದ ಭೂಪಟವನ್ನು ತಿರುಚಿ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ನಾಡದ್ರೋಹಿ ಗ್ರಾಫಿಕ್ ಮಾಡಿ ಅದನ್ನು ಪೋಸ್ಟ್‌ ಮಾಡಿರುವ ಶೆಳಕೆಗೆ ಚಳಿ ಬಿಡಿಸಬೇಕಿದೆ. 4/8
#ಎಂಇಎಸ್‌_ನಿಷೇಧಿಸಿ
"ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ" ಎಂದು ಉದ್ರೇಕಕಾರಿ ಬರಹ ಬರೆದ ಅವನ ವಿರುದ್ಧ ಭಯೋತ್ಪಾದಕ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು. ಬೆಳಗಾವಿ ಗಲಾಟೆಯಲ್ಲಿ ಜೈಲು ಸೇರಿದ್ದ ಶುಭಂ ಶೆಳಕೆ, ಈಗ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ ಎಂದರೆ ಏನರ್ಥ? 5/8
#ಎಂಇಎಸ್‌_ನಿಷೇಧಿಸಿ
ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಅಥವಾ ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ? ತಲೆಯ ಮೇಲೆ ಕೇಸರಿ ಪೇಟ, ಭುಜದ ಮೇಲೆ ಕೇಸರಿಶಾಲು ಧರಿಸಿ ಪೋಸು ಕೊಡುವ ಎಂಇಎಸ್ ಪುಂಡರ ಮೇಲೆ ಪ್ರಕರಣ ದಾಖಲಿಸಲು ಬಿಜೆಪಿ ಸರಕಾರದ ಮನಸ್ಸು ಒಪ್ಪುತ್ತಿಲ್ಲವಾ? ಸ್ಪಷ್ಟಪಡಿಸಲಿ. 6/8
#ಎಂಇಎಸ್‌_ನಿಷೇಧಿಸಿ
ಬಿಜೆಪಿ ಸರಕಾರಕ್ಕೆ ಇರುವುದು ಒಂದೇ ಆಯ್ಕೆ. ಎಂಇಎಸ್ ಅನ್ನು ಕೂಡಲೇ ನಿಷೇಧಿಸಬೇಕು ಹಾಗೂ ಕಿಡಿಗೇಡಿ ಶೆಳಖೆಯನ್ನು ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಇಲ್ಲವಾದರೆ ʼಬಿಜೆಪಿಯನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯ ಬಾಲʼ ಎನ್ನದೇ ವಿಧಿ ಇಲ್ಲ. 7/8
#ಎಂಇಎಸ್‌_ನಿಷೇಧಿಸಿ
ʼರಾಜ್ಯವಿರೋಧಿ ರಾಷ್ಟ್ರೀಯವಾದʼವನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ ಎನ್ನುವುದನ್ನು ಬಿಜೆಪಿ ನೆನಪಿನಲ್ಲಿ ಇಟ್ಟುಕೊಂಡರೆ ಒಳ್ಳೆಯದು. 8/8
#ಎಂಇಎಸ್‌_ನಿಷೇಧಿಸಿ

• • •

Missing some Tweet in this thread? You can try to force a refresh
 

Keep Current with H D Kumaraswamy

H D Kumaraswamy Profile picture

Stay in touch and get notified when new unrolls are available from this author!

Read all threads

This Thread may be Removed Anytime!

PDF

Twitter may remove this content at anytime! Save it as PDF for later use!

Try unrolling a thread yourself!

how to unroll video
  1. Follow @ThreadReaderApp to mention us!

  2. From a Twitter thread mention us with a keyword "unroll"
@threadreaderapp unroll

Practice here first or read more on our help page!

More from @hd_kumaraswamy

Apr 28
Actor @KicchaSudeep saying that Hindi is not a National Language is correct. There is nothing to find fault in his statement. Actor @ajaydevgn is not only hyper in nature but also shows his ludicrous behaviour. 1/7
Like Kannada, Telugu, Tamil, Malayalam & Marathi, Hindi is also one of languages. India is a garden of several languages. Land of multi cultures. Let there be no attempts to disrupt this. 2/7
Just because a large population speaks Hindi, it doesn’t become a National Language. Less than 9 States, Kashmir-Kanyakumari, have Hindi as 2nd, 3rd language or not even that. This being situation what is the truth in Ajay Devgan’s statement? What do you mean by not to dub? 3/7
Read 7 tweets
Apr 27
ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.2/7
ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ? 3/7
Read 7 tweets
Mar 2
NEET-National Eligibility and Entrance Test, is shattering dreams of middle class and the poor of studying medical education. NEET has become a Death Statue for the parents and students. Higher education is being reserved just for the haves while denying for the have-nots. 1/11
Tragic death of Navin, a medical student who was killed in a shell attack in Ukarine is a reflection of the NEET's shameless face which is causing injustice to talented but economically vulnerable rural students in the guise of qualification. 2/11
Navin secured 96 % in SSLC and 97% in PUC. Even then, he was denied a medical seat in India which is considered as Kashi of Global Education. It is not easy for a rural student to secure such high percentage. Despite that medical seat was denied. 3/11
Read 11 tweets
Mar 2
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.1/10
ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ. 2/10
10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ. 3/10
Read 10 tweets
Mar 1
I am utterly shocked and saddened by the death of a Navin Gynagoudar, a medical student studying at Kharkov in Ukarine. Navin, a native of Chalagere in Haveri district died during the violent Shell attack on Kharkiv by the Russian armed forces in the ongoing war. 1/6 Image
He had gone there with a dream to become a medical doctor as education in India is too expensive. The war has killed him and his dreams. There are several such students stranded in Kharkov. 2/6
Before being coming under Shell attack, Navin had spoken twice to his parents. It is heartening to know that a little later he died. Students are stranded in Kharkov due to bomb, missile and Shell attacks. 3/6
Read 6 tweets
Mar 1
ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ. 1/6
ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ, ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂಥ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. 2/6
ಶೆಲ್‌ ದಾಳಿಗೆ ತುತ್ತಾಗುವ ಮುನ್ನ 2 ಸಲ ತಮ್ಮ ಪೋಷಕರಿಗೆ ನವೀನ್‌ ಕರೆ ಮಾಡಿದ್ದರು, ಅದಾದ ಸ್ವಲ್ಪ ಹೊತ್ತಿನಲ್ಲೇ ಅಸುನೀಗಿದ್ದಾರೆ ಎಂಬುದನ್ನು ನೆನೆದರೆ ಬಹಳ ನೋವಾಗುತ್ತದೆ. ಬಾಂಬ್‌, ಕ್ಷಿಪಣಿ, ಶೆಲ್‌ ಸ್ಫೋಟಗಳಿಂದ ಅವರೆಲ್ಲರೂ ಖಾರ್ಕೀವ್‌ ನಗರದಲ್ಲಿ ತತ್ತರಿಸುತ್ತಿದ್ದಾರೆ. ಮೊದಲೇ ಇಲ್ಲಿ ಸಿಲುಕಿರುವವರನ್ನು ರಕ್ಷಿಸಬೇಕಿತ್ತು. 3/6
Read 6 tweets

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3/month or $30/year) and get exclusive features!

Become Premium

Don't want to be a Premium member but still want to support us?

Make a small donation by buying us coffee ($5) or help with server cost ($10)

Donate via Paypal

Or Donate anonymously using crypto!

Ethereum

0xfe58350B80634f60Fa6Dc149a72b4DFbc17D341E copy

Bitcoin

3ATGMxNzCUFzxpMCHL5sWSt4DVtS8UqXpi copy

Thank you for your support!

Follow Us on Twitter!

:(