ಹೆಮ್ಮೆಯ ಕನ್ನಡಿಗ | Former Chief Minister of Karnataka | ರಾಜ್ಯಾಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)
Mar 12, 2023 • 15 tweets • 2 min read
ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ.1/15
ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.2/15
Aug 8, 2022 • 14 tweets • 2 min read
ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ @JanataDal_S ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? 1/14
ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? 2/14
Aug 6, 2022 • 8 tweets • 2 min read
ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ.1/8
ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್ ಎಸ್, ಎತ್ತಿನಹೊಳೆ, ಕೆಸಿ.ವ್ಯಾಲಿ, ಹೆಚ್ ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ.2/8
Aug 2, 2022 • 10 tweets • 2 min read
ನಾಗಮಂಗಲದ @JanataDal_S ಸಮಾವೇಶವನ್ನು ನಮ್ಮ ಪೂಜ್ಯ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು,ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ.
ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ? ಛೇ!!1/10
ಬಿಜೆಪಿ ವಿಲಕ್ಷಣ, ವಿಕೃತ ಪಕ್ಷ. ಭೀಭತ್ಸ ಬಿಜೆಪಿ.
ಅಪರೇಷನ್ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ.
ಕಗ್ಗೊಲೆಗಳೇ ಅದರ ಕಸುಬು, ಬಡ ಯುವಕರ ರಕ್ತವೇ ಅದರ ಪಾಲಿನ ʼಅಧಿಕಾರಾಮೃತʼ. ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಆಮೇಲೆ ನನ್ನ ಕಣ್ಣೀರ ಬಗ್ಗೆ ಮಾತನಾಡಿ. 2/10
ಕರಾವಳಿಯಲ್ಲಿ ನಡೆದ ತ್ರಿವಳಿ ಕೊಲೆಗಳ ಗುಟ್ಟನ್ನು ಬೇಧಿಸಿ ನೈಜ ಹಂತಕರನ್ನು ಹಿಡಿಯುವ ಬದಲು ರಾಜ್ಯ ಬಿಜೆಪಿ ಸರಕಾರವು, ತಾನೇ ಮುಂದೆ ನಿಂತು ದಿನಕ್ಕೊಂದು ಕಥೆ ಕಟ್ಟುತ್ತಿದೆ. ಕ್ಷಣಕ್ಕೊಂದು ಟ್ವಿಸ್ಟ್ ಕೊಡುತ್ತಾ, ಜನರಿಗೆ ಸತ್ಯ ತಿಳಿಸುತ್ತಿಲ್ಲ. 1/4
ಮಂಗಳೂರಿನಲ್ಲಿ ನಿನ್ನೆ ಹೇಳಿದಂತೆ, ಅಗಸ್ಟ್ 5ರೊಳಗೆ ನೈಜ ಕೊಲೆಗೆಡುಕರನ್ನು ಬಂಧಿಸದಿದ್ದರೆ ನಾನು ಶಾಂತಿಯುತ ಸತ್ಯಾಗ್ರಹ ಕೂರುವುದು ಶತಃಸಿದ್ಧ.
ನನ್ನದು ಗಾಂಧೀ ಮಾರ್ಗ. ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷಕ್ಕೆ ನೆತ್ತರ ದಾರಿಯೇ ರಾಜಮಾರ್ಗ ಎನ್ನುವುದು ಕರಾವಳಿ ಜನರು ಅರ್ಥ ಮಾಡಿಕೊಂಡಿದ್ದಾರೆ. 2/4
May 31, 2022 • 7 tweets • 2 min read
ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?
ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ.1/7
'ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ? 2/7
May 18, 2022 • 12 tweets • 2 min read
ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. 'ಬಿಜೆಪಿ ಎಂಬ ಬುರುಡೆ ಪಾರ್ಟಿ 'ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ.1/12
ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಸ್ವಿಮ್ಮಿಂಗ್ ಪೂಲ್ ಮಾಡುತ್ತಿದ್ದಾರೆ! ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆಗಳಾಗಿವೆ. 2/12
May 2, 2022 • 8 tweets • 3 min read
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗಲೇ ರಾತ್ರೋರಾತ್ರಿ ʼಭಯೋತ್ಪಾದಕ ದಾಳಿʼ ನಡೆಸಿ ಹಿಂಸಾಕಾಂಡ ಸೃಷ್ಟಿಸಿದ್ದ, ನಮ್ಮ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಎಂಇಎಸ್ ಕಿರಾತಕರ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಮೃದುದೋರಣೆ ತಾಳಿದೆ ಎನ್ನುವುದು ನನ್ನ ನೇರ ಆರೋಪ.1/8 #ಎಂಇಎಸ್_ನಿಷೇಧಿಸಿ
ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್) ನಿಷೇಧಿಸಿ ಎಂದು ಇಡೀ ಕರ್ನಾಟಕವೇ ಒಕ್ಕೊರಲಿನಿಂದ ಆಗ್ರಹ ಮಾಡಿತ್ತು. ಬಿಜೆಪಿ ಸರಕಾರ ಅಸಡ್ಡೆ ತೋರಿದ ಪರಿಣಾಮ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಭಾಷೆ-ಭಾಷೆಗಳ ಜನರ ನಡುವೆ ಬೆಂಕಿ ಹಚ್ಚುವ ಇವರು ಭಯೋತ್ಪಾದಕರು. 2/8 #ಎಂಇಎಸ್_ನಿಷೇಧಿಸಿ
Apr 28, 2022 • 7 tweets • 2 min read
Actor @KicchaSudeep saying that Hindi is not a National Language is correct. There is nothing to find fault in his statement. Actor @ajaydevgn is not only hyper in nature but also shows his ludicrous behaviour. 1/7
Like Kannada, Telugu, Tamil, Malayalam & Marathi, Hindi is also one of languages. India is a garden of several languages. Land of multi cultures. Let there be no attempts to disrupt this. 2/7
Apr 27, 2022 • 7 tweets • 2 min read
ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.2/7
Mar 2, 2022 • 11 tweets • 2 min read
NEET-National Eligibility and Entrance Test, is shattering dreams of middle class and the poor of studying medical education. NEET has become a Death Statue for the parents and students. Higher education is being reserved just for the haves while denying for the have-nots. 1/11
Tragic death of Navin, a medical student who was killed in a shell attack in Ukarine is a reflection of the NEET's shameless face which is causing injustice to talented but economically vulnerable rural students in the guise of qualification. 2/11
Mar 2, 2022 • 10 tweets • 2 min read
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.1/10
ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ. 2/10
Mar 1, 2022 • 6 tweets • 1 min read
I am utterly shocked and saddened by the death of a Navin Gynagoudar, a medical student studying at Kharkov in Ukarine. Navin, a native of Chalagere in Haveri district died during the violent Shell attack on Kharkiv by the Russian armed forces in the ongoing war. 1/6
He had gone there with a dream to become a medical doctor as education in India is too expensive. The war has killed him and his dreams. There are several such students stranded in Kharkov. 2/6
Mar 1, 2022 • 6 tweets • 2 min read
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ. 1/6
ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ, ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂಥ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. 2/6
Jun 18, 2021 • 20 tweets • 4 min read
The measure of Tamil Nadu government with respect to Mekedatu reservoir as well as Cauvery river is detrimental to the interests of Karnataka. Unfortunately the BJP government in the state, which is supposed to look into such issues, has been debilitated by internal squabbling.
When the trouble-hit BJP has become so weak that it is finding it difficult to run the government, can any one expect commitment from it towards protection of the “Land, Water and Language” that form the core elements of the state?
Jun 18, 2021 • 10 tweets • 2 min read
ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ–ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲ–ಜಲ, ಭಾಷೆ–ನುಡಿಯ ಬಗ್ಗೆ ಅಕ್ಕರೆ ಇದ್ದೀತೆ?
1/10
ಇತ್ತೀಚೆಗೆ @narendramodi ಅವರನ್ನು ಭೇಟಿಯಾಗಿರುವ ತಮಿಳುನಾಡು ಸಿಎಂ @mkstalin ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಆಡಳಿತಾರೂಢ ಬಿಜೆಪಿ ಮೈಮರೆತು ಕುಳಿತಿದೆ.
2/10
Jun 17, 2021 • 8 tweets • 1 min read
ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ
- ಕೂಡಲ ಸಂಗಮದೇವ
ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ.
1/8
"ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ..." ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು.
2/8
Jun 13, 2021 • 16 tweets • 3 min read
While the Centre has been constantly increasing the price of petrol, Congress has been protesting against such a hike throughout the country. The Centre has been maintaining that petrol has to be brought under GST ambit if its prices have to be reduced....
Ironically, Congress too has argued that including petrol under GST can reduce its prices. This being the case, one would wonder if Congress is fighting to ensure reduction in prices of petrol or to include Petrol under GST?...
Jun 13, 2021 • 9 tweets • 2 min read
ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್ ಅನ್ನು GSTಗೆ ಸೇರಿಸಲೋ?
1/8
ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು GSTಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ,ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ.
2/8
Jun 7, 2021 • 10 tweets • 2 min read
ಕನ್ನಡಿಗರ ಭಾಷಾಭಿಮಾನವನ್ನು @Google,@amazon ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ,ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ.
1/10
ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.
2/10